ಎಲ್.ಕೆ ಅಡ್ವಾಣಿಗೆ ‘ಭಾರತ ರತ್ನ’ ಘೋಷಣೆ : ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ BSY

ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಭಾರತ ರತ್ನ ಘೋಷಣೆ ಮಾಡಲಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಹಿರಿಯ ನೇತಾರ, ಧೀಮಂತ ನಾಯಕ ಆದರಣೀಯ ಶ್ರೀ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿಯಿಂದ ಗೌರವಿಸಲಾಗುತ್ತಿರುವುದು ಅತ್ಯಂತ ಹೆಮ್ಮೆಯ ಮತ್ತು ಅಭಿನಂದನೀಯ ಸಂಗತಿ. ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಅವರ ಪ್ರಯತ್ನ ಅಸಾಧಾರಣವಾದದ್ದು, ಹಲವಾರು ದಶಕಗಳ ಸಾರ್ವಜನಿಕ ಜೀವನದಲ್ಲಿ ಅವರ ನಾಯಕತ್ವ, ಸಂಸದರಾಗಿ, ಕೇಂದ್ರ ಸಚಿವರಾಗಿ, ಉಪಪ್ರಧಾನಿಗಳಾಗಿ ಅವರ ಕೊಡುಗೆಯನ್ನು ದೇಶ ಎಂದಿಗೂ ಮರೆಯಲಾಗದು. ವೈಯಕ್ತಿಕವಾಗಿ ಕೂಡ, ಅವರೊಂದಿಗಿನ ಒಡನಾಟ, ಸಂಘಟನಾ ಕಾರ್ಯಗಳಲ್ಲಿ ಅವರ ಮಾರ್ಗದರ್ಶನಗಳನ್ನು ನಾನು ಎಂದಿಗೂ ಮರೆಯಲಾರೆ.

ಆ ಮೇರು ನಾಯಕನಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಸಲ್ಲಿಸಲಾಗುತ್ತಿರುವ ಈ ಸಾರ್ಥಕ ಸಂದರ್ಭದಲ್ಲಿ, ಪಕ್ಷದ ಕಾರ್ಯಕರ್ತರ ಹಾಗೂ ಅವರ ಅಭಿಮಾನಿಗಳ ಪರವಾಗಿ ಅವರಿಗೆ ಗೌರವಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಇನ್ನೂ ಸುದೀರ್ಘ ಕಾಲ ಆ ದೇವರು ಅವರಿಗೆ ಉತ್ತಮ ಆರೋಗ್ಯದೊಂದಿಗೆ ನಮಗೆ ಪ್ರೇರಣೆ ನೀಡುವ ಶಕ್ತಿಯನ್ನು ದಯಪಾಲಿಸಲಿ ಎಂದು ಕೋರುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

https://twitter.com/BSYBJP/status/1753672420173750627

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read