BIG NEWS: 8 ಸಲ ಚಿನ್ನದ ಅಂಬಾರಿ ಹೊತ್ತಿದ್ದ ‘ಅರ್ಜುನ’ ಆನೆ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಘೋಷಣೆ

ಬೀದರ್: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ 8 ಸಲ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಜನ ಮನ ಗೆದ್ದಿದ್ದ ಅರ್ಜುನ ಆನೆ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದೆ.

ಹಾಸನದ ಯಸಳೂರು ಸಮೀಪ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಹುತಾತ್ಮನಾಗಿತ್ತು. ಆಗಸ್ಟ್ 4ರಂದು ವೀರನಹೊಸಹಳ್ಳಿಯಲ್ಲಿ ಗಜ ಪಯಣದ ಸಂದರ್ಭದಲ್ಲಿ ಅರ್ಜುನನ ಹೆಸರಿನ ಮೊದಲ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಈ ಕುರಿತಾಗಿ ಮಾಹಿತಿ ನೀಡಿದ್ದಾರೆ. ಹೆಚ್.ಡಿ. ಕೋಟೆ ಶಾಸಕ ಅನಿಲ್ ಕುಮಾರ್ ಅವರು ಅರ್ಜುನ ಆನೆ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪನೆಗೆ ಸಲಹೆ ನೀಡಿದ್ದರು. ಅದರಂತೆ ಮಾನವ ವನ್ಯಜೀವಿ ಸಂಘರ್ಷ ತಡೆಗಟ್ಟುವ ಮತ್ತು ವನ್ಯಪ್ರಾಣಿಗಳ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ ಮತ್ತು ಸೆರೆಹಿಡಿಯುವ ಆನೆಗಳನ್ನು ಪಳಗಿಸಿ ಆರೈಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಾವುತ, ಸಿಬ್ಬಂದಿಗಳನ್ನು ಗುರುತಿಸಿ ಪ್ರತಿ ವರ್ಷ ನಡೆಯುವ ಗಜ ಪಯಣದ ಸಂದರ್ಭದಲ್ಲಿ ಅರ್ಜುನ ಆನೆ ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

1968 ರಲ್ಲಿ ಕಾಕನಕೋಟೆಯಲ್ಲಿ ನಡೆದ ಖೆಡ್ಡಾ ಕಾರ್ಯಚರಣೆಯಲ್ಲಿ ಅರ್ಜುನ ಆನೆ ಸೆರೆ ಹಿಡಿಯಲಾಗಿತ್ತು. 22 ಬಾರಿ ಜಂಬೂ ಸವಾರಿಯಲ್ಲಿ ಭಾಗವಹಿಸಿದ್ದ ಅರ್ಜುನ ಅಂಬಾರಿ ಹೊತ್ತಿತ್ತು. ಅರಣ್ಯ ಸಿಬ್ಬಂದಿಯ ಪ್ರಾಣ ಉಳಿಸಲು ಪ್ರಾಣ ತ್ಯಾಗ ಮಾಡಿದ ಅರ್ಜುನ ಆನೆಯ ಹೆಸರನ್ನು ಚಿರಸ್ತಾಯಿಯಾಗಿ ಉಳಿಯುವಂತೆ ಮಾಡಲು ಈ ಪ್ರಶಸ್ತಿ ಸ್ಥಾಪಿಸಲಾಗಿದೆ.

ಭೀಮ ಆನೆಯ ಮಾವುತ ಗುಂಡ ಹಾಗೂ ಕರಾವಳಿ ನಂಜುಂಡಸ್ವಾಮಿಯವರಿಗೆ 2025 ನೇ ಸಾಲಿನ ಅರ್ಜುನ ಆನೆ ಪ್ರಶಸ್ತಿ ನೀಡಲು ಆಯ್ಕೆ ಸಮಿತಿ ತೀರ್ಮಾನಿಸಿದೆ. ಹಾಸನ, ಸಕಲೇಶಪುರ, ಕೊಡಗು ಇತರೆ ಕಡೆಗಳಲ್ಲಿ ಆನೆ ಮತ್ತು ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗಿಯಾಗಿರುವ ಭೀಮ ಆನೆಯ ಮಾವುತ ಗುಂಡ ಮತ್ತು ಕವಾಡಿ ನಂಜುಂಡಸ್ವಾಮಿ ಈ ಬಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read