ದುನಿಯಾ ಡಿಜಿಟಲ್ ಡೆಸ್ಕ್ : ಹರಿಯಾಣದಲ್ಲಿ ಮತ್ತೊಂದು ಅಪಘಾತ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ 15 ಜನರ ಸ್ಥಿತಿ ಗಂಭೀರವಾಗಿದೆ.
ಗುರುಗ್ರಾಮದಿಂದ ಬಿಹಾರಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.
ಕುಶಿನಗರದ ಬಳಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ 15 ಮಂದಿ ಸ್ಥಿತಿ ಗಂಭೀರವಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
