ಬೆಂಗಳೂರು : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 5 ಕ್ಕೇರಿದೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದ ಯುವಕ ಮಂಜುನಾಥ್ ನನ್ನು ಬಂಧಿಸಲಾಗಿದೆ. ಮಂಜುನಾಥ್ ತನ್ನ ಐಪಿ ಅಡ್ರೆಸ್ ಡಿಲೀಟ್ ಮಾಡಿ ತನ್ನ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ 48 ಕಿಡಿಗೇಡಿಗಳ ಐಪಿ ಅಡ್ರೆಸ್ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು 15 ಮಂದಿಯನ್ನು ಗುರುತಿಸಿದ್ದಾರೆ. 5 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಕಮೆಂಟ್ ಮಾಡಿದವರಿಗೆ ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದಾರೆ. ನಾರ್ಮಲ್ ಆಗಿ ಕಮೆಂಟ್ ಮಾಡಿದ್ದವರು, ಅರಿವಿಲ್ಲದೇ ಮೆಸೇಜ್ ಮಾಡಿದ್ದವರು ಕ್ಷಮೆ ಕೇಳಿದ್ದಾರೆ.
You Might Also Like
TAGGED:ಅಶ್ಲೀಲ ಮೆಸೇಜ್