HomeKarnatakaವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ʻಬಂಪರ್ʼ ಅವಕಾಶ : ಮಾ. 9 ರಂದು ರಾಜ್ಯಾದ್ಯಂತ ʻರಾಷ್ಟ್ರೀಯ ಲೋಕ್...

ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ʻಬಂಪರ್ʼ ಅವಕಾಶ : ಮಾ. 9 ರಂದು ರಾಜ್ಯಾದ್ಯಂತ ʻರಾಷ್ಟ್ರೀಯ ಲೋಕ್ ಅದಾಲತ್’

ಬೆಂಗಳೂರು : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ 09 ರಂದು ರಾಜ್ಯದ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ.

ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು(ಆರ್‍ಇಆರ್‍ಎ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾಮಿರ್ವಕ ವಿವಾದಗಳು, ವಿದ್ಯುತ್ ಮತ್ತು ನೀರಿನ ಶುಲ್ಕಗಳು, ವೈವಾಹಿಕ, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಹಾಗೂ ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು.

ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‍ಒಪಿ ನಿಯಮಗಳಂತೆ ನಡೆಯುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-222373, ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular