HomeKarnataka‌ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಮಾ.16 ರಂದು ರಾಜ್ಯಾದ್ಯಂತ ʻಲೋಕ್ ಅದಾಲತ್ʼ

‌ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಮಾ.16 ರಂದು ರಾಜ್ಯಾದ್ಯಂತ ʻಲೋಕ್ ಅದಾಲತ್ʼ

ಬೆಂಗಳೂರು : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನಿರ್ದೇಶನದಂತೆ ಈ ಹಿಂದೆ ನಿಗದಿಪಡಿಸಿದ್ದ ಮಾ.09 ರಂದು ಬದಲಾಗಿ ಮಾ.16 ರಂದು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಏರ್ಪಡಿಸಲಾಗಿದೆ.

ಅದಾಲತ್‍ನಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಉಭಯ ಪಕ್ಷಗಾರರು ಹಾಗೂ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಕರಣಗಳನ್ನು  ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಿಕೊಳ್ಳಬಹುದು.

ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್‍ಬೌನ್ಸ್, ರಾಜಿಯಾಗಬಹುದಾದ ಕ್ರಿಮಿನಲ್ ಹಾಗೂ ಇತರ ಪ್ರಕರಣಗಳನ್ನು ಗುರುತಿಸಲಾಗಿದೆ. ಸದರಿ ಪ್ರಕರಣಗಳ ಉಭಯ ಕಕ್ಷಿದಾರರನ್ನು ಕರೆಯಿಸಿ ಅವರ ಒಪ್ಪಿಗೆಯ ಪ್ರಕಾರ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕ ಅದಾಲತ್‍ನಲ್ಲಿ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಛಕ್ತಿ, ಜಲಮಂಡಳಿ ಇನ್ನಿತರ ನ್ಯಾಯಾಲಯಕ್ಕೆ ಬರಬಹುದಾದ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಲಾಗುತ್ತದೆ. ಈ ಪ್ರಕರಣಗಳಲ್ಲಿ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ತೀರ್ಪು ನೀಡಲಾಗುವುದು. ಅಂತಹ ತೀರ್ಪುಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್ ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ, ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಸಮಯ ಉಳಿತಾಯವಾಗುತ್ತದೆ. ಶೀಘ್ರವಾಗಿ ನ್ಯಾಯ ಪಡೆಯಲು ಸಹ ಇದರಿಂದ ಸಾಧ್ಯವಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular