ಧಾರವಾಡ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ಆದೇಶದ ಮೇರೆಗೆ ಧಾರವಾಡ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 11, 2026 ರಂದು ರಾಷ್ಟ್ರೀಯ ಲೋಕ ಆದಾಲತ್ ಆಯೋಜಿಸಲಾಗುವುದು.
ಲೋಕ ಅದಾಲತ್‍ದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಲೋಕ್ ಆದಾಲತ್‍ನಲ್ಲಿ ಪೂರ್ವವ್ಯಾಜ್ಯ ಪ್ರಕರಣಗಳು ಹಾಗೂ ನ್ಯಾಯಾಲಯಗಳಲ್ಲಿ ರಾಜಿ ಆಗಬಹುದಾದ ಪ್ರಕರಣಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಾಜಿ ಸಂದಾನ ಮಾಡಿಕೊಳ್ಳಲು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ವರ್ಗಕ್ಕೆ ಸೇರಿರುವ ವಿದ್ಯಾರ್ಥಿಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಧಾರವಾಡ : 2026-27ನೇ ಶೈಕ್ಷಣಿಕ ಸಾಲಿಗೆ ಪ್ರತಿಭಾವಂತ ಪರಿಶಿಷ್ಟ ವರ್ಗಕ್ಕೆ ಸೇರಿರುವ 6ನೇ ತರಗತಿ ವಿದ್ಯಾರ್ಥಿಗಳನ್ನು ಧಾರವಾಡ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಯ್ಕೆಯನ್ನು ಅರ್ಹ ಪ್ರವೇಶ ಪರೀಕ್ಷೆ ಮೂಲಕ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಸೌಲಭ್ಯ, ಸಮವಸ್ತ್ರ, ಪಠ್ಯ ಪುಸ್ತಕ ಇನ್ನಿತರೇ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಯನ್ನು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಿಸಿ ಕಂಪೌಂಡ ಧಾರವಾಡ ಮತ್ತು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ರವರ ಕಚೇರಿಯಿಂದ ಪಡೆದು, ಮೇ 04, 2026 ರೊಳಗೆ ಆಯಾ ತಾಲ್ಲೂಕುಗಳಿಗೆ ಅರ್ಜಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

