HomeKarnataka'ವ್ಯಾಜ್ಯ' ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ಜು.13 ರಂದು ರಾಜ್ಯಾದ್ಯಂತ ಲೋಕ ಅದಾಲತ್

‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ಜು.13 ರಂದು ರಾಜ್ಯಾದ್ಯಂತ ಲೋಕ ಅದಾಲತ್

ಬೆಂಗಳೂರು : ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ‘ಲೋಕ್ ಅದಾಲತ್’ ಕಾರ್ಯಕ್ರಮ ಜುಲೈ 13 ರ ಶನಿವಾರದಂದು ನಡೆಯಲಿದ್ದು, ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ಸಿಕ್ಕಂತಾಗಿದೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಇವರ ನಿರ್ದೇಶನದ ಮೇರೆಗೆ ಜು.13 ರಂದು ಲೋಕ್ ಅದಾಲತ್ ನಡೆಯಲಿದೆ .

ವಿಭಜನಾ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳನ್ನು ಗುರುತಿಸಿ, ಸದರಿ ಪ್ರಕರಣಗಳ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ಅವರ ಒಪ್ಪಿಗೆಯ ಪ್ರಕಾರ ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೂ ಅಲ್ಲದೇ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಛಕ್ತಿ, ಜಲಮಂಡಳಿ ಹಾಗೂ ನ್ಯಾಯಾಲಯಕ್ಕೆ ಬರಬಹುದಾದಂತಹ ಇತರೆ ಯಾವುದೇ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಸಿ, ಅವುಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜೀ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ಅವಾರ್ಡ್ ಪಾಸು ಮಾಡಲಾಗುವುದು. ಅಂತಹ ಅವಾರ್ಡ್ ನ್ಯಾಯಾಲಯದಲ್ಲಿ ಮಾಡಬಹುದಾದ ಡಿಕ್ರಿ(ತೀರ್ಪು) ಇದ್ದಂತೆ. ಇಂತಹ ಅವಾರ್ಡ್ಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶ ಇದೆ. ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಅವರ ಅಮೂಲ್ಯ ಸಮಯ ಉಳಿತಾಯವಾಗುತ್ತದೆ. ಅಲ್ಲದೇ ಶೀಘ್ರವಾಗಿ ನ್ಯಾಯದಾನವಾಗುತ್ತದೆ  ಎಂದು ಪ್ರಕಟಣೆ ತಿಳಿಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular