HomeKarnatakaವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಮಾ.16 ರಂದು ರಾಜ್ಯಾದ್ಯಂತ ʻಲೋಕ್ ಅದಾಲತ್ʼ

ವ್ಯಾಜ್ಯ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಮಾ.16 ರಂದು ರಾಜ್ಯಾದ್ಯಂತ ʻಲೋಕ್ ಅದಾಲತ್ʼ

ರಾಷ್ಟ್ರೀಯ ಲೋಕ್ ಅದಾಲತ್ ಮಾರ್ಚ್ 16 ಕ್ಕೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ತಿಳಿಸಿದ್ದಾರೆ. ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ಲೋಕ ಅದಾಲತ್ನಲ್ಲಿ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಛಕ್ತಿ, ಜಲಮಂಡಳಿ ಇನ್ನಿತರ ನ್ಯಾಯಾಲಯಕ್ಕೆ ಬರಬಹುದಾದ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಲಾಗುತ್ತದೆ. ಈ ಪ್ರಕರಣಗಳಲ್ಲಿ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ತೀರ್ಪು ನೀಡಲಾಗುವುದು. ಅಂತಹ ತೀರ್ಪುಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್ ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ, ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಸಮಯ ಉಳಿತಾಯವಾಗುತ್ತದೆ. ಶೀಘ್ರವಾಗಿ ನ್ಯಾಯ ಪಡೆಯಲು ಸಹ ಇದರಿಂದ ಸಾಧ್ಯವಾಗುತ್ತದೆ.

ಹೆಚ್ಚಿನ ಮಾಹಿತಿಗೆ ವೆಬ್ಸೈಟ್: www.kslsa.kar.nic.in ಸಹಾಯವಾಣಿ ಸಂಖ್ಯೆ 15100 ಮತ್ತು 1800-425-90900 ಅಥವಾ ನಿಮ್ಮ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular