HomeKarnataka'ವ್ಯಾಜ್ಯ' ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಡಿ.14 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಆದಾಲತ್.!

‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ : ಡಿ.14 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಆದಾಲತ್.!

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ಆದೇಶದ ಮೇರೆಗೆ ಧಾರವಾಡ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿಸೆಂಬರ್ 14, 2024 ರಂದು ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ರಾಷ್ಟ್ರೀಯ ಲೋಕ ಆದಾಲತ್ ಆಯೋಜಿಸಲಾಗುವುದು.

ಲೋಕ ಅದಾಲತ್ದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಸಿವಿಲ್ ವ್ಯಾಜ್ಯ, ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕ್, ಸಹಕಾರಿ ಸಂಘ, ಖಾಸಗಿ ವ್ಯಕ್ತಿಗಳ ನಡುವಿನ ಚೆಕ್ ಅಮಾನ್ಯ, ಹಣ ವಸೂಲಾತಿ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳು, ಜೀವನಾಂಶ, ವೈವಾಹಿಕ ಪ್ರಕರಣಗಳು (ವಿವಾಹ ವಿಚ್ಛೇದನ ಹೊರತುಪಡಿಸಿ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ವಿದ್ಯುಚ್ಛಕ್ತಿ ಮತ್ತು ನೀರಿನ ಶುಲ್ಕ ಪಾವತಿ ಪ್ರಕರಣಗಳು, ಸಾರ್ವಜನಿಕ ಸೇವೆ ಮತ್ತು ನಿವೃತ್ತಿ ವೇತನಗಳಿಗೆ ಸಂಬಂಧಿಸಿದ ಪ್ರಕರಣಗಳು, ಕಂದಾಯ ಮತ್ತು ಅದಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಿನಲ್ಲಿ ರಾಜಿ ಆಗಬಹುದಾದ ಎಲ್ಲಾ ತರಹದ ಕ್ರಿಮಿನಲ್ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸಿವಿಲ್ ವ್ಯಾಜ್ಯಗಳಲ್ಲಿ ಪಕ್ಷಗಾರರು ಲೋಕ್-ಅದಾಲತ್ನಲ್ಲಿ ರಾಜಿಯಾದರೆ ಪಕ್ಷಗಾರರು ಸರ್ಕಾರಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ವಾಪಸ್ಸು ಕೊಡಲು ಅವಕಾಶವಿದೆ. ಲೋಕ್ಅದಾಲತ್ನಲ್ಲಿ ಉಭಯ ಪಕ್ಷಗಾರರು ಪರಸ್ಪರ ಒಪ್ಪಿದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿರುವ ನ್ಯಾಯಮೂರ್ತಿಗಳ ಆಶಯದಂತೆ ಲೋಕ್ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಪಡಿಸಲು, ಸಾರ್ವಜನಿಕರು ವಿಶೇಷವಾಗಿ ಕಕ್ಷಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ ಅದಾಲತ್ನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular