ಮತ್ತೊಂದು ನಿಗಮದ ಭ್ರಷ್ಟಾಚಾರ ಬೆಳಕಿಗೆ: ಭೋವಿ ನಿಗಮದ ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ನಿಖಿಲ್ ಒತ್ತಾಯ

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ಅನುದಾನ ನೀಡಲು ನಿಗಮದ ಅಧ್ಯಕ್ಷ ರವಿಕುಮಾರ್ ಕಮಿಷನ್ ಕೇಳುತ್ತಿರುವ ಹಗರಣ ಜಗಜ್ಜಾಹಿರಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಬಳಸಬೇಕಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ನುಂಗಿ ನೀರು ಕುಡಿದ ಸಿದ್ದರಾಮಯ್ಯ ಸರಕಾರವು ಅಷ್ಟಕ್ಕೇ ಸುಮ್ಮನಾಗದೇ SCSP/ TSP ನಿಧಿಯಲ್ಲಿನ ಹಣವನ್ನು ಬೇರೆಡೆ ವರ್ಗಾಯಿಸಿ, ದಲಿತರಿಗೆ ಅನ್ಯಾಯ ಮಾಡಿದ ಘಟನೆ ಮಾಸುವ ಮುನ್ನವೆ ಮತ್ತೊಂದು ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದಿದೆ.

ಬೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ಅನುದಾನ ನೀಡಲು ನಿಗಮದ ಅಧ್ಯಕ್ಷರು ಕಮಿಷನ್ ಕೇಳುತ್ತಿರುವ ಹಗರಣ ಜಗಜ್ಜಾಹಿರಾಗಿದೆ. ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ಸಹಾಯಧನ ಬಿಡುಗಡೆ ಮಾಡಲು 5 ಲಕ್ಷ ಕಮಿಷನ್ ಗೆ ಬೇಡಿಕೆ ಇಟ್ಟಿರುವ ಭೋವಿ ನಿಗಮದ‌ ಅಧ್ಯಕ್ಷ ರವಿಕುಮಾರ್ ಅವರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ದಲಿತ ವಿರೋಧಿ ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿಗಳು ಹಾಗೂ ರೀಲ್ಸ್ ಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ನಿಖಿಲ್ ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read