ವಿಜಯಪುರ : ವಿಜಯಪುರದಲ್ಲಿ ಮತ್ತೆ ಭೂಕಂಪನ ಸಂಭವಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಇಂದು ಮಂಗಳವಾರ ಬೆಳಗ್ಗೆ 7 :49 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ವಿಜಯಪುರ ನಗರ, ತಿಕೋಟ, ತೊರವಿ, ಶಿವಗಿರಿ, ಹೊನ್ನೊಟಗಿ, ವಿಜಯಪುರ, ತಿಕೋಟ ತಾಲೂಕಿನಲ್ಲಿ ಭೂಮಿ ಕಂಪಿಸಿದೆ. ಜಿಲ್ಲೆಯಲ್ಲಿ ಕಳೆದ 12 ತಿಂಗಳಿನಲ್ಲಿ 13 ಬಾರಿ ಭೂಮಿ ಕಂಪಿಸಿದೆ.
