ಕೆಂಪೇಗೌಡ ಏರ್ಪೋರ್ಟ್ ಗೆ ಮತ್ತೊಂದು ಗರಿ: ಎಸಿಐ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ನಿಲ್ದಾಣಗಳಲ್ಲಿನ ಸೌಲಭ್ಯ ಪ್ರಯಾಣಿಕ ಸ್ನೇಹಿ ಸೌಕರ್ಯ ಮತ್ತು ತಂತ್ರಜ್ಞಾನ ಬಳಕೆಗಾಗಿ ಎಸಿಐನ ಎರಡನೇ ಹಂತದ ಪ್ರಮಾಣ ಪತ್ರ ಪಡೆದುಕೊಂಡಿದೆ.

ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ(ಎಸಿಐ) ಪ್ರವೇಶವರ್ಧಕ ಮಾನ್ಯತೆ ಕಾರ್ಯಕ್ರಮದಡಿ ವಿಮಾನ ನಿಲ್ದಾಣಗಳಲ್ಲಿ ತಂತ್ರಜ್ಞಾನ ಬಳಕೆ, ಪ್ರಯಾಣಿಕ ಸ್ನೇಹಿ ಸೌಲಭ್ಯ ಆಧರಿಸಿ ಮಾನ್ಯತೆ ನೀಡುತ್ತದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಎಸಿಐನ ಎರಡನೇ ಹಂತದ ಮಾನ್ಯತೆ ಪಡೆದ ದೇಶದ ಮೊದಲ ನಿಲ್ದಾಣ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಿರಿಯ ನಾಗರಿಕರು, ವಿಕಲಚೇತನರು ಸುಲಭವಾಗಿ ಸಂಚರಿಸಲು ಮತ್ತು ಇತರೆ ಸೌಲಭ್ಯವನ್ನು ಸರಳವಾಗಿ ಬಳಸಿಕೊಳ್ಳಲು ಸೂಕ್ತವಾದ ವ್ಯವಸ್ಥೆ ಕಲ್ಪಿಸಲಾಗಿದೆ. ಇಲ್ಲಿನ ಸೌಕರ್ಯಗಳನ್ನು ಪರಿಗಣಿಸಿ ಮಾನ್ಯತೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read