ಬೆಂಗಳೂರು: ಬೆಂಗಳೂರಿನ ವೀರಣ್ಣಪಾಳ್ಯ ಮುಖ್ಯ ರಸ್ತೆಯ ಸಮೀಪ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕೂಲಿ ಕಾರ್ಮಿಕರು ವಾಸವಾಗಿದ್ದ 40ಕ್ಕೂ ಹೆಚ್ಚು ಶೆಡ್ ಗಳು ಬೆಂಕಿಗಾಹುತಿಯಾಗಿವೆ.
ಆಟಿಕೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗಾಗಿ 50 ಶೆಡ್ ಗಳನ್ನು ನಿರ್ಮಿಸಲಾಗಿದ್ದು, ಅಗ್ನಿ ಅವಘಡದಿಂದಾಗಿ 40 ಶೆಡ್ ಗಳು ನಾಶವಾಗಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.