ರಾಜ್ಯ ಸರ್ಕಾರದಿಂದ `APL-BPL’ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಬಿಪಿಎಲ್ ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣ ಚಿಕಿತ್ಸೆ ನೀಡುವ ಉದ್ದೇಶದ ಡಾ. ಪುನೀತ್ ರಾಜ್ ಕುಮಾರ್ ಹೃದಯಜ್ಯೋತಿ ಯೋಜನೆಯನ್ನು ನವೆಂಬರ್ ನಲ್ಲಿ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಅಂತ್ಯಕ್ಕೆ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಚಾಲನೆ ನೀಡಲಿದ್ದು, ರಾಜ್ಯದ 16 ಸೂಪರ್ ಸ್ಪೆಷಾಲಿಟಿ, 85 ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಯೋಜನೆ ಜಾರಿಯಾಗಲಿದೆ ಎಂದು ಹೇಳಿದ್ದಾರೆ.ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಿಸಿರುವ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 85 ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳನ್ನು ಸ್ಪೋಕ್ ಕೇಂದ್ರಗಳಾಗಿ, 16 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಹಬ್ ಗಳನ್ನಾಗಿ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಎದೆ ನೋವು ಕಾಣಿಸಿಕೊಂಡವರು ಸ್ಪೋಕ್ ಕೇಂದ್ರಗಳಿಗೆ ಭೇಟಿ ನೀಡಿದ ಕೂಡಲೇ ಅವರಿಗೆ ಇಸಿಜಿ ಮಾಡಿಸಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ಪರಿಸ್ಥಿತಿ ಅವಲೋಕಿಸಿ ಗಂಭೀರ ಪರಿಸ್ಥಿತಿ ಇದ್ದರೆ ಟೆನೆಕ್ಟ್ ಪ್ಲಸ್ ಇಂಜೆಕ್ಷನ್ ನೀಡಲಾಗುವುದು. ಅಲ್ಲಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತದೆ. ಟೆನೆಕ್ಟ್ ಪ್ಲಸ್ ಇಂಜೆಕ್ಷನ್ ಗೆ 35 ರಿಂದ 40 ಸಾವಿರ ರೂ. ಖರ್ಚಾಗಲಿದ್ದು, ಸ್ಪೋಕ್ ಕೇಂದ್ರಗಳಲ್ಲಿ ಇದನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read