ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಸಾಲ, ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಸಾಲಿನ ಆಯವ್ಯಯದಲ್ಲಿ ರೈತ ಉತ್ಪಾದಕರ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ ರೂ.20 ಲಕ್ಷ ವರೆಗಿನ ಸಾಲಕ್ಕೆ ಶೇ.4 ರ ಬಡ್ಡಿ ಸಹಾಯಧನ ನೀಡಲಾಗುವುದು ಎಂದು ಫೋಷಿಸಲಾಗಿದೆ ಹಾಗೂ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ.

ಕೃಷಿ ಇಲಾಖೆಯು (ಜಲಾನಯನ ಅಭಿವೃದ್ಧಿ ಇಲಾಖೆ) ಜಿಲ್ಲೆಯ ಹಿಂದುಳಿದ ತಾಲ್ಲೂಕುಗಳಲ್ಲಿ ಕಂಪನಿ ಕಾಯ್ದೆ 2013 ಅಡಿಯಲ್ಲಿ ನೋಂದಾಯಿಸಿ, ಕನಿಷ್ಠ 600 ರೈತ, ಷೇರುದಾರರನ್ನು ಹೊಂದಿ, 2022-23ನೇ ಸಾಲಿನಲ್ಲಿ ವಾರ್ಷಿಕ ಕನಿಷ್ಠ ರೂ.20 ಲಕ್ಷಗಳ ವರೆಗೆ ವ್ಯಾಪಾರ ವಹಿವಾಟು ಮಾಡಿ, ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳ ಮೂಲಕ 2023ರ ಏ.01 ರಿಂದ ಗರಿಷ್ಠ ರೂ.20 ಲಕ್ಷಗಳವರೆಗೆ ರೈತ ಉತ್ಪಾದಕರ ಸಂಸ್ಥೆಗಳು ಪಡೆದ ಸಾಲಕ್ಕೆ ಶೇ.4 ರಷ್ಟು ಬಡ್ಡಿ ಸಹಾಯಧನ ನೀಡಲು ರೈತ ಉತ್ಪಾದಕರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನವಾಗಿದೆ. ಸ್ವೀಕೃತವಾದ ಸೂಕ್ತ ಅರ್ಜಿಗಳಿಗೆ ನಿಯಮಾನುಸಾರ ಬಡ್ಡಿ ಸಹಾಯಧನವನ್ನು ಸಂಬಂಧಿಸಿದ ರೈತ ಉತ್ಪಾದಕರ ಸಂಸ್ಥೆಗಳ ಸಾಲದ ಖಾತೆಗೆ ಪಾವತಿಸಲಾಗುವುದು.

ಆಸಕ್ತಿಯುಳ್ಳ ಅರ್ಹ ರೈತ ಉತ್ಪಾದಕರ ಸಂಸ್ಥೆಗಳು ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರ, ಉಪ ಕೃಷಿ ನಿರ್ದೇಶಕರ, ಸಹಾಯಕ ಕೃಷಿ ನಿರ್ದೇಶಕರ, ರೈತ ಸಂಪರ್ಕ ಕೇಂದ್ರದ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read