HomeLatest Newsಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್: ಆರ್ಥಿಕ ಶಕ್ತಿ ತುಂಬಲು ಸ್ತ್ರೀಶಕ್ತಿ ಸಂಘಗಳ ಮಾದರಿಯಲ್ಲಿ ಜಂಟಿ ಹೊಣೆಗಾರಿಕೆ...

ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್: ಆರ್ಥಿಕ ಶಕ್ತಿ ತುಂಬಲು ಸ್ತ್ರೀಶಕ್ತಿ ಸಂಘಗಳ ಮಾದರಿಯಲ್ಲಿ ಜಂಟಿ ಹೊಣೆಗಾರಿಕೆ ಗುಂಪು ರಚನೆ

ಬೆಂಗಳೂರು: ಗೃಹಲಕ್ಷ್ಮಿಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಲು ಸ್ತ್ರೀ ಶಕ್ತಿ ಸಹ ಸ್ವಸಹಾಯ ಸಂಘಗಳ ಮಾದರಿಯಲ್ಲಿ ಜಂಟಿ ಹೊಣೆಗಾರಿಕೆ ಗುಂಪುಗಳನ್ನು ರಚಿಸಲಾಗುವುದು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಪ್ರತಿನಿಧಿಗಳೊಂದಿಗೆ ಬುಧವಾರ ಪೂರ್ವಭಾವಿ ಸಭೆ ನಡೆಸಿದ ಸಚಿವರು ನಂತರ ಮಾತನಾಡಿದರು.

ಗೃಹಲಕ್ಷ್ಮಿ ಯೋಜನೆ ಜಾರಿಯಾದ ನಂತರ ಪ್ರತಿ ಫಲಾನುಭವಿ ಕುಟುಂಬದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜನಪ್ರಿಯವಾಗಿದೆ. ಫಲಾನುಭವಿಗಳನ್ನು ಒಳಗೊಂಡ ಜಂಟಿ ಹೊಣೆಗಾರಿಕೆ ಗುಂಪುಗಳನ್ನು ರಚಿಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಶೀಘ್ರವೇ ಅಂತಿಮ ರೂಪುರೇಷೆ ಸಿದ್ದಪಡಿಸಲಾಗುವುದು. ಆರಂಭದಲ್ಲಿ ಪ್ರಾಯೋಗಿಕವಾಗಿ 500 ಗುಂಪು ರಚಿಸಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭವಾಗಿ 50 ವರ್ಷಗಳಾಗಿದ್ದು, ಆಗಸ್ಟ್ 2ರಂದು ಸುವರ್ಣ ಮಹೋತ್ಸವ ಸಮಾರಂಭ ನಡೆದಿದೆ. ಈ ವೇಳೆಗೆ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ಜಂಟಿ ಹೊಣೆಗಾರಿಕೆ ಗುಂಪುಗಳ ರಚನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular