HomeLatest Newsಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಹಳದಿ ಮಾರ್ಗ ನಿಲ್ದಾಣಗಳಿಂದ ಫೀಡರ್ ಬಸ್ ಸೇವೆ ಆರಂಭ

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಹಳದಿ ಮಾರ್ಗ ನಿಲ್ದಾಣಗಳಿಂದ ಫೀಡರ್ ಬಸ್ ಸೇವೆ ಆರಂಭ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ಆಗಸ್ಟ್ 11ರಿಂದ ಸಾರ್ವಜನಿಕ ಪ್ರಯಾಣಕ್ಕೆ ಹಳದಿ ಮೆಟ್ರೋ ಮಾರ್ಗ ಮುಕ್ತವಾಗಿದೆ.

ಇದೀಗ ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಹಳದಿ ಮೆಟ್ರೋ ನಿಲ್ದಾಣಗಳಿಂದ ಬಿಎಂಟಿಸಿ ಫೀಡರ್ ಬಸ್ ಸೇವೆ ಆರಂಭಿಸಿದೆ. ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಆರ್.ವಿ. ರಸ್ತೆ, ಬೊಮ್ಮಸಂದ್ರ ಮಾರ್ಗದಲ್ಲಿ ಬಿಎಂಟಿಸಿ ಹೊಸದಾಗಿ ಫೀಡರ್ ಬಸ್ ಗಳ ಕಾರ್ಯಾಚರಣೆ ಕೈಗೊಂಡಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.

ಹಳದಿ ಮಾರ್ಗದಲ್ಲಿ ಸಂಸ್ಥೆಯು ಒಟ್ಟು 4 ಮಾರ್ಗಗಳಲ್ಲಿ ಫೀಡರ್ ಬಸ್ ಸೇವೆ ಆರಂಭಿಸಿದ್ದು, 12 ಬಸ್ ಗಳು 96 ಟ್ರಿಪ್ ಕಾರ್ಯಾಚರಣೆ ನಡೆಸಲಿವೆ. ಎಲೆಕ್ಟ್ರಾನಿಕ್ ಸಿಟಿ, ಇನ್ಫೋಸಿಸ್ ಫೌಂಡೇಶನ್, ಕೋನಪ್ಪನ ಅಗ್ರಹಾರ, ಹೆಬ್ಬಗೋಡಿ, ಬೊಮ್ಮಸಂದ್ರ ಸೇರಿದಂತೆ ಒಟ್ಟು 6 ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದಾಗಿ ಮೆಟ್ರೋ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular