HomeKarnatakaರಾಜ್ಯ ಸರ್ಕಾರದಿಂದ `SC-ST’ ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್ : `ಉದ್ಯಮಶೀಲತಾ ತರಬೇತಿ’ಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದಿಂದ `SC-ST’ ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್ : `ಉದ್ಯಮಶೀಲತಾ ತರಬೇತಿ’ಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ವಾಣಿಜ್ಯ ಚಟುವಟಿಕೆ / ಉದ್ಯಮಗಳನ್ನು ಪ್ರಾರಂಭಿಸಲು ಇಚ್ಚಿಸುವ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ಸಿಡಾಕ್ ಸಂಸ್ಥೆಯ ಮೂಲಕ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಉದ್ಯಮ ಶೀಲತಾ ತರಬೇತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  1. ವಯೋಮಿತಿ-ಕನಿಷ್ಠ21 ವರ್ಷಹಾಗೂ ಗರಿಷ್ಠ 50 ವರ್ಷ
  2. ಶೈಕ್ಷಣಿಕಅರ್ಹತೆ-ಪಿ.ಯು.ಸಿಮತ್ತು ಮೇಲ್ಪಟ್ಟು

ತರಬೇತಿಯ ಬಗ್ಗೆ ವಿವರ

  1. ಉದ್ದಿಮೆ,  ವಾಣಿಜ್ಯಚಟುವಟಿಕೆಗಳನ್ನುಪ್ರಾರಂಭಿಸಲು ಉತ್ತೇಜನ ಮತ್ತು ಮಾರ್ಗದರ್ಶನ ನೀಡಲು ಉದ್ಯಮಶೀಲತಾ ತರಬೇತಿಯನ್ನು ಆಯೋಜಿಸಲಾಗಿದೆ.
  2. ಸರ್ಕಾರದವಿವಿಧಇಲಾಖೆಗಳಿಂದ  ಪ.ಜಾತಿ/ಪ.ಪಂಗಡದವರಿಗೆ ಉದ್ದಿಮೆಗಳನ್ನು ಸ್ಥಾಪಿಸಲು ನೀಡಲಾಗುವ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು.
  3. ರಾಷ್ಟ್ರೀಕೃತಬ್ಯಾಂಕ್ಹಾಗೂ ಇತರೆ ಬ್ಯಾಂಕ್‌ಗಳು ಸೇರಿದಂತೆ ವಿವಿಧ ಹಣಕಾಸು ಸಂಸ್ಥೆಗಳಿಂದ ನೀಡಲಾಗುವ ಸಾಲ ಸೌಲಭ್ಯದ ಮಾಹಿತಿಯನ್ನು ನೀಡಲಾಗುವುದು.
  4. ಆಯಾಜಿಲ್ಲಾಕೇಂದ್ರಗಳಲ್ಲಿ ಹತ್ತು ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.
  5. ತರಬೇತಿಗೆಹಾಜರಾಗಲುಪ್ರತಿ  ಅಭ್ಯರ್ಥಿಗೆ ಪ್ರಯಾಣ ಭತ್ಯೆಯಾಗಿ ಹತ್ತು ದಿನಗಳಿಗೆ ರೂ. 1,000/-ಗಳ ಕ್ರೋಡೀಕೃತ ಮೊತ್ತವನ್ನು ನೀಡಲಾಗುವುದು.

ಅರ್ಜಿ  ಸಲ್ಲಿಸಲು ಕೊನೆಯ ದಿನಾಂಕ: 30.11.2023

ಅರ್ಜಿ ಸಲ್ಲಿಸಲು ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ www.scsptsp.Karnataka.gov.in r ಭೇಟಿ ನೀಡಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣಮಿತ್ರ 24 x 7 ಸಹಾಯವಾಣಿ 9482300400ಗೆ ಸಂಪರ್ಕಿಸಬಹುದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular