HomeKarnatakaರಾಜ್ಯದ `SC-ST’ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ :`ಪ್ರೇರಣಾ ಯೋಜನೆ’ ಯಡಿ ಸಾಲ, ಸೌಲಭ್ಯಕ್ಕಾಗಿ...

ರಾಜ್ಯದ `SC-ST’ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ :`ಪ್ರೇರಣಾ ಯೋಜನೆ’ ಯಡಿ ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ಜಾತಿ/ಪಂಗಡದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲು ಪ್ರೇರಣಾ (ಮೈಕ್ರೋಕ್ರೆಡಿಟ್‌)  ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹರು  ಇದೇ ನವೆಂಬರ್ 29ರ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರೇರಣಾ   ಯೋಜನೆಗೆ   ಅರ್ಜಿ   ಆಹ್ವಾನ

ಪ್ರೇರಣಾ (ಮೈಕ್ರೋಕ್ರೆಡಿಟ್) ಯೋಜನೆಯಡಿ ಪರಿಶಿಷ್ಟ ಜಾತಿ/ಪಂಗಡದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲು ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ  ಸಲ್ಲಿಸಲು  ಬೇಕಾದ  ದಾಖಲೆಗಳು :

© ಜಾತಿ  ಪ್ರಮಾಣಪತ್ರ, ಆದಾಯ ಪ್ರಮಾಣ ಪತ್ರ

© ಆದಾಯ  ಮಿತಿ ಗ್ರಾಮೀಣ ಪ್ರದೇಶದಲ್ಲಿ ರೂ.1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ

© ಸಂಘವು  ನೋಂದಣಿಯಾಗಿದ್ದು ಕನಿಷ್ಠ 10 ಜನ ಸದಸ್ಯರನ್ನು ಒಳಗೊಂಡಿರಬೇಕು

© ಕುಟುಂಬದ  ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್

ಆಸಕ್ತ  ಅರ್ಹರು ನವೆಂಬರ್ 29ರ ಒಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ  ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ X ಖಾತೆ @SWDGokfswd.gok

For Latest News Updates, Join Our Whatsapp Community🚩
RELATED ARTICLES

Most Popular