ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಸಂಜೆ ಸ್ನ್ಯಾಕ್ಸ್ ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ ಹತ್ತನೇ ತರಗತಿವರೆಗಿನ ಮಕ್ಕಳಿಗೆ ರಾಗಿ ಹೆಲ್ತ್ ಮಿಕ್ಸ್ ಪುಡಿ ಮಿಶ್ರಿತ ಬಿಸಿ ಹಾಲು ನೀಡುವ ಕಾರ್ಯಕ್ರಮವನ್ನು ವಾರದಲ್ಲಿ ಐದು ದಿನಗಳಿಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇದೇ ವೇಳೆ ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಅನುದಾನದಲ್ಲಿ ದಸರಾ ರಜೆ ಮುಗಿದ ನಂತರ ಸಂಜೆ ವೇಳೆ ಶಾಲಾ ಮಕ್ಕಳಿಗೆ ವಿಶೇಷ ಪೌಷ್ಟಿಕಾಂಶ ಸ್ನ್ಯಾಕ್ಸ್ ನೀಡಲಾಗುವುದು. ಬಳ್ಳಾರಿ, ಚಿತ್ರದುರ್ಗ, ವಿಜಯನಗರ, ತುಮಕೂರು ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳಿಗೆ ಈ ಸೌಲಭ್ಯ ಸಿಗಲಿದೆ.

ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗಾಗಿನ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಅನುದಾನವನ್ನು ಮಕ್ಕಳ ಆರೋಗ್ಯ ರಕ್ಷಣೆಗೆ ಬಳಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಗಣಿ ಬಾಧಿತ ನಾಲ್ಕು ಜಿಲ್ಲೆಗಳು ಹತ್ತು ತಾಲೂಕುಗಳ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಗಳ ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ಸಂಜೆ ವೇಳೆ ಸ್ನ್ಯಾಕ್ಸ್ ನೀಡಲಾಗುವುದು. ಪ್ರತಿ ಮಗುವಿಗೆ ವಾರದಲ್ಲಿ ಒಂದು ದಿನ ಕೆಎಂಎಫ್ ನಂದಿನಿ ಪೇಡ ಅಥವಾ ಮೈಸೂರು ಪಾಕ್, ವಾರದಲ್ಲಿ ನಾಲ್ಕು ದಿನ ಹಣ್ಣು, ಎರಡು ದಿನ ಬೇಯಿಸಿದ ತರಕಾರಿ ನೀಡಲು ವಿತರಿಸಲಾಗಿದೆ. ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಲಾಗಿದೆ. ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ನಿಯೋಜಿತರಾಗಿದ್ದು ದಸರಾ ಮುಗಿದ ನಂತರ ಶಾಲೆಗಳಲ್ಲಿ ಸಂಜೆ ಲಘು ಉಪಾಹಾರ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read