HomeKarnatakaರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : `7 ನೇ ವೇತನ ಆಯೋಗ’ ಜಾರಿ...

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : `7 ನೇ ವೇತನ ಆಯೋಗ’ ಜಾರಿ ಬಗ್ಗೆ ಮಹತ್ವದ ಘೋಷಣೆ

ಬೆಂಗಳೂರು : 2022 ರ ನವೆಂಬರ್ನಲ್ಲಿ ರಚಿಸಲಾದ 7 ನೇ ವೇತನ ಆಯೋಗವು ಮುಂದಿನ ತಿಂಗಳೊಳಗೆ ತನ್ನ ಶಿಫಾರಸುಗಳನ್ನು ಸಲ್ಲಿಸುವ ನಿರೀಕ್ಷೆಯಿದೆ ಮತ್ತು ಅದರ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಶುಕ್ರವಾರ ಹೇಳಿದ್ದಾರೆ.

ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವೇತನ ಆಯೋಗವು ತನ್ನ ಶಿಫಾರಸುಗಳನ್ನು ನವೆಂಬರ್ನಲ್ಲಿ ಸಲ್ಲಿಸುವಂತೆ ತಿಳಿಸಲಾಗಿತ್ತು. ವೇತನ ಆಯೋಗದ ವರದಿ ಅನುಷ್ಠಾನದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಭರವಸೆ ನೀಡಿದ್ದಾರೆ. ಸರ್ಕಾರಿ ನೌಕರರು ಆತಂಕ ಪಡುವ ಅಗತ್ಯವಿಲ್ಲ. ಅದನ್ನು ಜಾರಿಗೆ ತರಲಾಗುವುದು ಎಂದು ಪರಮೇಶ್ವರ್ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲು ಸರ್ಕಾರ ಶೀಘ್ರದಲ್ಲೇ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಅವರು ಹೇಳಿದರು.

ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹೊಸ ಪಿಂಚಣಿ ಯೋಜನೆಯನ್ನು (NPS) ರದ್ದುಗೊಳಿಸಲು ಮತ್ತು ಹಳೆಯ ಪಿಂಚಣಿ ಯೋಜನೆಯನ್ನು (OPS) ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಸಮಿತಿಯೊಂದನ್ನು ರಚಿಸಲಾಗಿದೆ. ವರದಿಯ ಆಧಾರದ ಮೇಲೆ ರಾಜ್ಯ ಸರ್ಕಾರ ನಿರ್ಧರಿಸುತ್ತದೆ” ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular