HomeKarnatakaಉನ್ನತ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಮತ್ತೊಂದು 'ಗುಡ್ ನ್ಯೂಸ್'

ಉನ್ನತ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಮತ್ತೊಂದು ‘ಗುಡ್ ನ್ಯೂಸ್’

ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ಮತ್ತು ಸ್ನಾತಕೋತರ ಪದವಿ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಖಾಲಿ ಉಳಿಯುವ ಸೀಟುಗಳಿಗೆ ವಿವಿಗಳೇ ಪ್ರವೇಶ ಪರೀಕ್ಷೆ ನಡೆಸಿ ದಾಖಲಾತಿ ನೀಡಬಹುದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ ಹೇಳಿದೆ.

ಈ ಕುರಿತಂತೆ ಯುಜಿಸಿ ಅಧ್ಯಕ್ಷ ಎಂ. ಜಗದೀಶ್ ಕುಮಾರ್ ಮಾಹಿತಿ ನೀಡಿದ್ದು, ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ ಯು ಇ ಟಿ) ನಡೆಸಿ ಸೀಟು ಹಂಚಿಕೆ ಮಾಡಿದ ಬಳಿಕವೂ ಕೆಲ ಸೀಟುಗಳು ಖಾಲಿ ಇರುವುದು ಯುಜಿಸಿ ಗಮನಕ್ಕೆ ಬಂದಿದೆ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಶೈಕ್ಷಣಿಕ ವರ್ಷ ಪೂರ್ತಿ ಸೀಟುಗಳನ್ನು ಖಾಲಿ ಇಡುವುದು ಸೂಕ್ತವಲ್ಲ ಎಂಬ ನಿರ್ಧಾರಕ್ಕೆ ಯುಜಿಸಿ ಬಂದಿದ್ದು, ಈ ರೀತಿ ಮಾಡಿದರೆ ಉನ್ನತ ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಶಿಕ್ಷಣ ನಿರಾಕರಿಸಿದಂತಾಗುತ್ತದೆ. ಹೀಗಾಗಿ ವಿಶ್ವವಿದ್ಯಾಲಯಗಳೇ ಪ್ರವೇಶ ಪರೀಕ್ಷೆ ನಡೆಸಿ ದಾಖಲಾತಿ ಮಾಡಿಕೊಳ್ಳಬಹುದು. ಈ ಸಂದರ್ಭದಲ್ಲಿ ಪ್ರವೇಶ ಪರೀಕ್ಷೆ ಅಥವಾ ಅರ್ಹತಾ ಪರೀಕ್ಷೆಯ ಅಂಕಗಳೇ ಮಾನದಂಡವಾಗಿರುತ್ತವೆ ಎಂದು ಅವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular