HomeKarnatakaರಾಜ್ಯ ಸರ್ಕಾರದ ʻಗ್ಯಾರಂಟಿ ಯೋಜನೆʼಗಳ ಫಲಾನುಭವಿಗಳಿಗೆ ಮತ್ತೊಂದು ಗುಡ್‌ ನ್ಯೂಸ್!

ರಾಜ್ಯ ಸರ್ಕಾರದ ʻಗ್ಯಾರಂಟಿ ಯೋಜನೆʼಗಳ ಫಲಾನುಭವಿಗಳಿಗೆ ಮತ್ತೊಂದು ಗುಡ್‌ ನ್ಯೂಸ್!

‌ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿವೆಯೇ ಎಂಬ ಬಗ್ಗೆ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹೌದು, ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿವೆಯೇ ಎಂದು ಸ್ವಯಂ ಸೇವಕರಿಂದ ರಾಜ್ಯವ್ಯಾಪಿ ಸಮೀಕ್ಷೆಗೆ ಸರ್ಕಾರ ಆದೇಶಿಸಿದೆ. ಆಶಾ ಕಾರ್ಯಕರ್ತೆಯರು, ಅಂಗನ ವಾಡಿ ಕಾರ್ಯರ್ತೆಯರು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂ ದಿಯನ್ನು ಗ್ಯಾರಂಟಿ ಸ್ವಯಂ ಸೇವಕರೆಂದು ಗುರುತಿಸಿ ಅವರನ್ನು ಮನೆ ಮನೆಗೆ ಕಳುಹಿಸಿ ಮುಂದಿನ 10ರಿಂದ 15 ದಿನ ಗಳಲ್ಲಿ ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಸಮೀಕ್ಷೆ ನಡೆಸಬೇಕೆಂದು ಸೂಚಿಸಲಾಗಿದೆ.

ಈ ಸಮೀಕ್ಷೆಗೆ ಒಬ್ಬರಿಗೆ ಒಂದು ಬಾರಿಗೆ ಸೀಮಿತಗೊಳಿಸಿ 1000 ರು. ಹೆಚ್ಚುವರಿ ಪ್ರೋತ್ಸಾಹಧನ ಕೂಡ ಸರ್ಕಾರ ನೀಡಲಿದೆ. ಸಮೀಕ್ಷಾ ಕಾರ್ಯಕ್ಕೆ ಅಂಗನವಾಡಿ ಕಾಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಯನ್ನು ಒಳಗೊಂಡ 1.2 ಲಕ್ಷ ಗ್ಯಾರಂಟಿ ಸ್ವಯಂ ಸೇವಕ ರೆಂದು ನೇಮಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular