HomeIndiaMahalakshmi Scheme : ದೇಶದ ಮಹಿಳೆಯರಿಗೆ ಹೊಸ ಯೋಜನೆ ಘೋಷಣೆ : ಪ್ರತಿ ವರ್ಷ 1...

Mahalakshmi Scheme : ದೇಶದ ಮಹಿಳೆಯರಿಗೆ ಹೊಸ ಯೋಜನೆ ಘೋಷಣೆ : ಪ್ರತಿ ವರ್ಷ 1 ಲಕ್ಷ ಹಣ ಖಾತೆಗೆ ಜಮಾ..!

ಯಜಮಾನಿಯರಿಗೆ ಕಾಂಗ್ರೆಸ್ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಪ್ರತಿ ವರ್ಷ 1ಲಕ್ಷ ಹಣ ಖಾತೆಗೆ ಜಮಾ ಮಾಡುವುದಾಗಿ ಘೋಷಿಸಿದೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಟಿ ನಡೆಸಿ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದರು.

ಇದೀಗ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಮಹಿಳೆಯರ ಮಹಾಲಕ್ಷ್ಮಿ ಯೋಜನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ಮೂಲಕ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ ದೇಶದ ಬಡಕುಟುಂಬಗಳ ಯಜಮಾನಿಯರಿಗೆ ತಲಾ ರೂ.1 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. ಇದಕ್ಕೆ ನಮ್ಮ ಸರ್ಕಾರದ ಸಾಧನೆಗಳು ಸಾಕ್ಷಿ ಎಂದಿದ್ದಾರೆ.

ದೇಶಾದ್ಯಂತ ಆರ್ಥಿಕವಾಗಿ ಹಿ೦ದುಳಿದಿರುವ ಕುಟು೦ಬಗಳ ಮಹಿಳೆಯರಿಗೆ ಪ್ರತಿ ವರ್ಷ ₹1 ಲಕ್ಷ ಹಣಕಾಸಿನ ನೆರವು ನೀಡಲಾಗುತ್ತಿದೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ಹಣ ಜಮೆ ಮಾಡಲಾಗುತ್ತಿದೆ. ನಿಮ್ಮ ಒ೦ದು ಮತದಿ೦ದ ಸಮಸಮಾಜ ನಿರ್ಮಾಣದ ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular