ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ನಿಮ್ಮ ಸಮಸ್ಯೆಗಳಿಗೆ ʻಮನೆ ಬಾಗಿಲಲ್ಲೇ ಸಿಗಲಿದೆ ಪರಿಹಾರʼ!

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜನರ ಸಮಸ್ಯೆಗಳಿಗೆ ಮನೆ ಬಾಗಿಲಲ್ಲೇ ಪರಿಹಾರ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾಹಿತಿ ನೀಡಿದ್ದು, ಜನರ ಸಮಸ್ಯೆಗಳಿಗೆ ಮನೆ ಬಾಗಿಲಲ್ಲೇ ಪರಿಹರಿಸಲು ಹಮ್ಮಿಕೊಂಡಿರುವ ಜನಸ್ಪಂದನ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ. ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬುದು ಈ ಬಾರಿಯ ಜನಸ್ಪಂದನ ಕಾರ್ಯಕ್ರಮದ ಘೋಷ ವಾಖ್ಯ. ತಮ್ಮ ಸಮಸ್ಯೆಗಳನ್ನು ಪರಿಹರಿಸುವಂತೆ ಜನ ಅರ್ಜಿ ಹಿಡಿದು ಸುತ್ತುವುದನ್ನು ತಪ್ಪಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮವನ್ನು ವಿಧಾನಸಭಾ ಕ್ಷೇತ್ರಗಳನ್ನು ವಿಭಾಗಿಸಿ ಆಯಾ ವಲಯದಲ್ಲಿ ಒಂದೊಂದು ದಿನ ಮೀಸಲಿಡಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ನಿಗದಿ ಮಾಡಲಾಗಿದ್ದು, ಅದರ ಮಾಹಿತಿಯನ್ನು ಜಾಹೀರಾತುಗಳ ಮೂಲಕ ಪ್ರಕಟಿಸಲಾಗುವುದು. ಎಂದು ತಿಳಿಸಿದರು.

ಸಾರ್ವಜನಿಕರು ನನ್ನ ಬಳಿ, ಮುಖ್ಯಮಂತ್ರಿಗಳು ಹಾಗೂ ಇತರ ಸಚಿವರುಗಳ ಬಳಿ ಪ್ರತಿನಿತ್ಯ ನೂರಾರು ಅರ್ಜಿಗಳನ್ನು ತರುತ್ತಾರೆ. ಇದನ್ನು ಕಡಿಮೆ ಮಾಡುವ ಉದ್ದೇಶದಿಂದ ಜನರ ಬಳಿಗೇ ಸರ್ಕಾರ ಹೋಗಲಿದ್ದು, ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಜನರ ಅಹವಾಲು ಸ್ವೀಕಾರ ಮಾಡಲು ಜನಸ್ಪಂದನ ಕಾರ್ಯಕ್ರಮ ನಡೆಸುವಂತೆ ಸರ್ಕಾರ ಸಚಿವರುಗಳಿಗೆ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read