HomeKarnatakaಬಡಜನತೆಗೆ ಮತ್ತೊಂದು ಗುಡ್ ನ್ಯೂಸ್ : `ನಮ್ಮ ಕ್ಲಿನಿಕ್’ ಸೇವೆ ಅವಧಿ ವಿಸ್ತರಣೆ

ಬಡಜನತೆಗೆ ಮತ್ತೊಂದು ಗುಡ್ ನ್ಯೂಸ್ : `ನಮ್ಮ ಕ್ಲಿನಿಕ್’ ಸೇವೆ ಅವಧಿ ವಿಸ್ತರಣೆ

ಬೆಂಗಳೂರು : ನಗರ ಆರೊಗ್ಯ ಮತ್ತು ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್)ಗಳು ಇನ್ಮುಂದೆ ಪ್ರತಿ ದಿನ ಬೆಳಿಗ್ಗೆ 8ರಿಂದ ಮದ್ಯಾಹ್ನ 12 ಗಂಟೆಯವರೆಗೆ ಹಾಗೂ ಮದ್ಯಾಹ್ನ 4 ರಿಂದ ರಾತ್ರಿ 8 ಗಂಟೆಯವರೆಗೆ ಎರಡು ಹಂತದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

15ನೇ ಹಣಕಾಸು ಆಯೋಗದಡಿಯಲ್ಲಿ ನಗರ ಪ್ರದೇಶದಲ್ಲಿ ವಾಸಸಿಸುವ ಬಡ, ದುರ್ಬಲ, ಕೂಲಿ ಕಾರ್ಮಿಕರು ಮತ್ತು ದುಡಿಯುವ ವರ್ಗದ ಸಮುದಾಯಕ್ಕೆ  ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳ್ನು ಒದಗಿಸುವ ಉದ್ದೇಶದಿಂದ ಮತ್ತು ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಕಲ್ಪಿಸುವ ಉದ್ದೇಶದಿಂದ ನಮ್ಮ ಕ್ಲಿನಿಕ್ ಪ್ರಾರಂಭಿಸಲಾಗಿರುತ್ತದೆ.  ಈ ನಗರ ಆರೋಗ್ಯ ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್‌ಗಳು) ಬೆಳಗ್ಗೆ 9 ರಿಂದ 4.30ರವರೆಗೆ ಕಾರ್ಯರ್ನಿಹಿಸುತ್ತಿದ್ದವು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದುಡಿಯುವ ವರ್ಗದ ಜನರಿಗೆ ಹಾಗೂ ದಿನಗೂಲಿ ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ಸೇವೆ ನೀಡಲು ಮತ್ತು ದೂರದ ರೆಫೆರಲ್ ಆಸ್ಪತ್ರೆಗಳಿಗೆ ತೆರಳುವುದನ್ನು ತಪ್ಪಿಸುವ ಉದ್ದೇಶದಿಂದ ಕಾರ್ಯನಿರ್ವಹಣೆಯ ಸಮಯದಲ್ಲಿ ಬದಲಾವಣೆ ಮಾಡುವ ಕುರಿತ ಆದೇಶದಂತೆ ಪ್ರಾಯೋಗಿಕವಾಗಿ ಕೊಪ್ಪಳದ ನಗರ ಆರೊಗ್ಯ ಮತ್ತು ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್)ಗಳ ಸಮಯವನ್ನು ಪ್ರತಿ ದಿನ ಬೆಳಿಗ್ಗೆ 8ರಿಂದ ಮದ್ಯಾಹ್ನ 12ರ ವರೆಗೆ ಹಾಗೂ ಮದ್ಯಾಹ್ನ 4 ರಿಂದ ರಾತ್ರಿ 8ರ ವರೆಗೆ ಕಾರ್ಯನಿರ್ವಹಿಸಲಿದ್ದು, ಈ ಬದಲಾದ ಈ ಸಮಯದಲ್ಲಿ ದೊರೆಯುವ ಆರೋಗ್ಯ ಸೇವೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular