ರಾಜ್ಯದ ಬಡ ಜನತೆಗೆ ಸಿಎಂ ಮತ್ತೊಂದು ಗುಡ್ ನ್ಯೂಸ್ : ಹೆಚ್ಚುವರಿ 188 ʻಇಂದಿರಾ ಕ್ಯಾಂಟೀನ್ʼ ಸ್ಥಾಪನೆ

ಬೆಂಗಳೂರು : ರಾಜ್ಯದ ಬಡ ಜನತೆಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‌ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್‌ ಗಳನ್ನು ಹಿಂದಿನ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು. ಇದನ್ನು ಸರಿಪಡಿಸುವ ಜೊತೆಗೆ ಅಗತ್ಯವಿರುವ ಕಡೆಗಳಲ್ಲಿ ಹೆಚ್ಚುವರಿ ಕ್ಯಾಂಟೀನ್‌ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು. ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಹೆಚ್ಚುವರಿ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್ ಗೆ ಸ್ಥಳದ ಅಭಾವವಿರುವ ಕಡೆ ಮೊಬೈಲ್ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read