GOOD NEWS : ಗೃಹಲಕ್ಷ್ಮಿಯರಿಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೀಘ್ರವೇ ‘ಸಹಕಾರ ಸಂಘ’ ಸ್ಥಾಪನೆ.!

ಬೆಂಗಳೂರು : ಸಾಲ ಸೌಲಭ್ಯ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಗೃಹಲಕ್ಷ್ಮಿ ಸಹಕಾರ ಸಂಘಗಳನ್ನು ಸ್ಥಾಪಿಸಲಿದೆ .ಹೆಚ್ಚಿನ ಮಟ್ಟದಲ್ಲಿ ಉದ್ಯಮ ನಡೆಸಲು ಸಾಲ ಸೌಲಭ್ಯ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಗೃಹಲಕ್ಷ್ಮಿ ಸಹಕಾರ ಸಂಘಗಳನ್ನು ಸ್ಥಾಪಿಸಲಿದೆ .

ಈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿ ಮಾಹಿತಿ ನೀಡಿದೆ. ಗೃಹಲಕ್ಷ್ಮಿಯರ ಸ್ವಯಂ ಉದ್ಯಮದ ಕನಸಿಗೆ ಕಾಂಗ್ರೆಸ್ ಸರ್ಕಾರದ ಆರ್ಥಿಕ ಚೈತನ್ಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಸ್ವಯಂ ಉದ್ಯಮಿಗಳನ್ನಾಗಿ ಮಾಡಿ ಸ್ವಾವಲಂಬನೆ ಸಾಧಿಸುವಂತೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ಸಂಘ ಸ್ಥಾಪನೆಯ ಮಹತ್ವದ ಹೆಜ್ಜೆ ಇಟ್ಟಿದೆ. ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ 1.24 ಕೋಟಿ ಮಹಿಳೆಯರು ಪ್ರತಿ ತಿಂಗಳು ₹2,000 ಪಡೆಯುತ್ತಿದ್ದು, ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಸ್ವಂತ ಉದ್ಯಮ ಆರಂಭಿಸುವ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಅವರಿಗೆ ಹೆಚ್ಚಿನ ಮಟ್ಟದಲ್ಲಿ ಉದ್ಯಮ ನಡೆಸಲು ಸಾಲ ಸೌಲಭ್ಯ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಗೃಹಲಕ್ಷ್ಮಿ ಸಹಕಾರ ಸಂಘಗಳನ್ನು ಸ್ಥಾಪಿಸಲಿದೆ ಎಂದಿದೆ.

ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೆ ‘ದೀಪಿಕಾ’ ಆಸರೆ

ರಾಜ್ಯ ಕಾಂಗ್ರೆಸ್ ಸರ್ಕಾರ ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ತಲಾ ₹30,000 ವಿದ್ಯಾರ್ಥಿವೇತನ ನೀಡುವ ‘ದೀಪಿಕಾ’ ಯೋಜನೆಯನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದಡಿ 7 ವರ್ಷಗಳ ಕಾಲ ವಿದ್ಯಾರ್ಥಿ ವೇತನ ನೀಡಲು ಸುಮಾರು 2000 ಕೋಟಿ ರೂಪಾಯಿಗಳನ್ನು ಅಜೀಂ ಪ್ರೇಮ್ ಜಿ ಫೌಂಡೇಶನ್ ನೀಡುತ್ತಿದ್ದು ರಾಜ್ಯ ಸರ್ಕಾರ 200 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಿದೆ ಎಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read