ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ‘ಸ್ತ್ರೀಶಕ್ತಿ’ ಮಾದರಿಯಲ್ಲೇ ‘ಗೃಹಲಕ್ಷ್ಮಿ ಸಂಘ’ ಸ್ಥಾಪನೆ.!

ಬೆಂಗಳೂರು : ಸ್ತ್ರೀಶಕ್ತಿ ಮಾದರಿಯಲ್ಲೇ ರಾಜ್ಯದಲ್ಲಿ ಗೃಹಲಕ್ಷ್ಮೀ ಸಂಘ ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ ಎಂದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರನ್ನು ಸ್ವಾವಲಂಬಿಯನ್ನಾಗಿಸುವ ಉದ್ದೇಶ ನನ್ನದು. ಹಾಗಾಗಿ ಗೃಹಲಕ್ಷ್ಮೀ ಸಂಘಗಳ ಮೂಲಕ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಟಿಯ ಫಲವಾಗಿ ಇಂದು ಕರ್ನಾಟಕದಲ್ಲಿ ಮಹಿಳೆಯರ ಸಬಲೀಕರಣ ಮಾಡಲಾಗುತ್ತಿದೆ . ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳೆಯರನ್ನು ಸ್ವಾವಲಂಬಿಯನ್ನಾಗಿಸುವ ಉದ್ದೇಶ ನನ್ನದು. ಹಾಗಾಗಿ ಗೃಹಲಕ್ಷ್ಮೀ ಸಂಘಗಳ ಮೂಲಕ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read