ವಿಶ್ವಕರ್ಮ ಸಮುದಾಯದವರಿಗೆ ಮತ್ತೊಂದು ಗುಡ್ ನ್ಯೂಸ್ : ಸಹಾಯಧನ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳ ವಿವರ: ನಿಗಮದಿಂದ ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ. ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ, ಈ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶ ಸಂಖ್ಯೆ:ಸಕಇ/225/ಬಿಸಿಎ/2000 ದಿನಾಂಕ:30/03/2002ರನ್ವಯ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. 18 ರಿಂದ 55 ವರ್ಷಗಳ ವಯೋಮಿತಿಯಲ್ಲಿರಬೇಕು. ನಿಗಮದ ಅಥವಾ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

ಅರಿವು ಯೋಜನೆಯಡಿ ವಯೋಮಿತಿ 18 ರಿಂದ 30 ವರ್ಷ, ವಾರ್ಷಿಕ ವರಮಾನ ರೂ.3.50 ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಗಂಗಾ ಕಲ್ಯಾಣ ಯೋಜನೆಯಡಿ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು.

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000 ಮತ್ತು ನಗರ  ಪ್ರದೇಶದವರಿಗೆ  1,20,000 ರೂ.ಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ 33ರಷ್ಟು ವಿಕಲಚೇತನರಿಗೆ ಶೇ 5ರಷ್ಟು ಹಾಗೂ ತೃತೀಯ ಲಿಂಗಿಗಳಿಗೆ ಶೇ 1ರಷ್ಟು ಮೀಸಲಾತಿ ಇರಿಸಿದೆ. ವಿದೇಶಿ ವ್ಯಾಸಂಗ ಯೋಜನೆಯಡಿ ವಾರ್ಷಿಕ ವರಮಾನವು ರೂ.8 ಲಕ್ಷಗಳ ಮಿತಿಯಲ್ಲಿರಬೇಕು.

ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ  ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ (ಶ್ರೀ /ಶ್ರೀಮತಿ /ಕುಮಾರಿ ಮುಂತಾದ ಮಾಹಿತಿಗಳು) ತಾಳೆಯಾಗಬೇಕು. ಕರ್ನಾಟಕ-ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ. ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಅರ್ಜಿಯನ್ನು  www.kaushalkar.com ನಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್  https://kvcdcl.karnataka.gov.in. ರಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 080-22374848, 7899899039 ಯಿಂದ ಪಡೆಯಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read