HomeLatest News‘ಗೃಹಲಕ್ಷ್ಮಿ’ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರದಿಂದ ಸಾಲ ಸೌಲಭ್ಯ ನೀಡಲು ಸಹಕಾರ ಸಂಘ...

‘ಗೃಹಲಕ್ಷ್ಮಿ’ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರದಿಂದ ಸಾಲ ಸೌಲಭ್ಯ ನೀಡಲು ಸಹಕಾರ ಸಂಘ ಸ್ಥಾಪನೆ

ಮೈಸೂರು: ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಲ್ಲಿ ಸಹಕಾರ ಸಂಘ ಸ್ಥಾಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮೈಸೂರು ದಸರಾ ಅಂಗವಾಗಿ ಜಿಕೆ ಮೈದಾನದಲ್ಲಿ ಆಯೋಜಿಸಿದ್ದ ಮಹಿಳಾ ದಸರಾ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಎಂದರೆ ಸ್ವಾವಲಂಬನೆಯ ಪ್ರತೀಕ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ. ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನ ಕಟ್ಟಿ ಕೊಡಬೇಕು. ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಎನ್ನುವ ಚಿಂತನೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿಟ್ಟುಕೊಂಡು ಗ್ಯಾರಂಟಿ ಯೋಜನೆ ಜಾರಿಗೆ ತರಲಾಗಿದೆ. ಕೋಟ್ಯಂತರ ಮಹಿಳೆಯರು ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯರಿಗೆ ಬ್ಯಾಂಕುಗಳಿಂದ ಸರಿಯಾಗಿ ಸಾಲ ಸಿಗುತ್ತಿಲ್ಲ. ಇದರಿಂದಾಗಿ ಅವರಿಗೆ ಜೀವನ ರೂಪಿಸಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಮನಗಂಡು ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪಿಸಲಿದ್ದು, ಈ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಸ್ವಾವಲಂಬಿಗಳನ್ನಾಗಿ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular