ಬೆಂಗಳೂರು: ಆಟೋ ಚಾಲನಾ ತರಬೇತಿ ಪಡೆಯುವ ಮಹಿಳೆಯರು, ಮಂಗಳಮುಖಿಯರಿಗೆ ವೃತ್ತಿಜೀವನ ಪ್ರಾರಂಭಿಸಲು ಸರ್ಕಾರದಿಂದ ಉಚಿತವಾಗಿ ಆಟೋ ಒದಗಿಸುವ ಬಗ್ಗೆ ಸರ್ಕಾರ ಮತ್ತು ಜಿಬಿಎ ಜೊತೆ ಚರ್ಚಿಸುವುದಾಗಿ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಹೇಳಿದ್ದಾರೆ.
ಬಿ ಪ್ಯಾಕ್, ಕಿರ್ಲೋಸ್ಕರ್, ಸಿಜಿಐ ಸಹಯೋಗದಲ್ಲಿ ಶನಿವಾರ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ ಕಲಾ ಕೇಂದ್ರದಲ್ಲಿ ಶಾಂತಿನಗರ ಕ್ಷೇತ್ರದ ಮಂಗಳಮುಖಿಯರು, ಮಹಿಳೆಯರಿಗೆ ಉಚಿತ ಆಟೋ ಚಾಲನಾ ತರಬೇತಿಗೆಚಾಲನೆ ನೀಡಿ ಅವರು ಮಾತನಾಡಿದರು.
ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಉಚಿತವಾಗಿ ಆಟೋ ಚಾಲನಾ ತರಬೇತಿ ನೀಡುತ್ತಿರುವುದು ಶ್ಲಾಘನೀಯವಾಗಿದೆ. ಅರ್ಹರಿಗೆ ಸರ್ಕಾರದಿಂದಲೇ ಉಚಿತವಾಗಿ ಆಟೋ ಒದಗಿಸುವ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಭರವಸೆ ನೀಡಿದ್ದಾರೆ.
Inaugurated the auto-driving skills training for women & transgender persons at Rangasthala, Rangoli Metro Art Center, MG Road.
— N A Haris (@mlanaharis) September 13, 2025
A milestone in empowerment & inclusivity.
Appreciate the efforts of Kirloskar, CGI & B-PAC for this model initiative. pic.twitter.com/1rLQVBQvhx