JOB ALERT : ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ಕಲಬುರಗಿಯಲ್ಲಿ ನಾಳೆ ‘ನೇರ ಸಂದರ್ಶನ’ ಆಯೋಜನೆ

ಕಲಬುರಗಿ : ಉದ್ಯೋಗಾವಕಾಶದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಕಲಬುರಗಿ ವತಿಯಿಂದ ಸುವರ್ಣವಕಾಶವನ್ನು ಕಲ್ಪಿಸಿಕೊಡಲಾಗುತ್ತಿದ್ದು, ನಾಳೆ ನೇರ ಸಂದರ್ಶನ ಆಯೋಜಿಸಿದೆ.

ಭಾರತದ ಪ್ರಮುಖ ಎಲೆಕ್ಟ್ರಾನಿಕ್ ತಯಾರಿಕಾ ಫ್ಯಾಕ್ಟರಿಯಲ್ಲಿ ಮೊಬೈಲ್ ಫೋನ್ ಜೋಡಣೆ ಮತ್ತು ಟೆಸ್ಟಿಂಗ್ ಕೆಲಸಗಳಿಗೆ ಮಹಿಳೆಯರನ್ನು ನೇಮಿಸಿಕೊಳ್ಳಲು ದಿನಾಂಕ 21-01-2024 ಭಾನುವಾರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರಗೆ ಕಲಬುರಗಿಯ GTTC, ಪ್ಲಾಟ್ ನಂ 122, ದರ್ಶಾನಪುರ ಲೇಔಟ್, ಎಮ್ ಬಿ ರಸ್ತೆ,ಸಂತ್ರಾಸವಾಡಿ ಕಲಬುರಗಿಯಲ್ಲಿ ಉದ್ಯೋಗ ಶಿಬಿರವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಶಿಬಿರದಲ್ಲಿ ಭಾಗವಹಿಸುವ ಮಹಿಳೆಯರು 20-01-2024 ಶನಿವಾರದಂದು ಜಿಟಿಎಸ್ ಕಾಲೇಜಿನಲ್ಲಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದ್ದು, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರವನ್ನು ನೀಡಲಾಗುತ್ತದೆ.

ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳಿಗೆ ಸುರಕ್ಷತೆಯೊಂದಿಗೆ ಉಚಿತ ಸಾರಿಗೆ ವ್ಯವಸ್ಥೆ ಸೇರಿದಂತೆ, ಊಟ ಹಾಗೂ ವಸತಿ ವ್ಯವಸ್ಥೆಯು ಇರಲಿದೆ. ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಶಿಬಿರದಲ್ಲಿ ಪಾಲ್ಗೊಂಡು, ಈ ಅವಕಾಶವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕೆಂದು ಆಶಿಸುತ್ತೇನೆ.ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್ ನಂಬರ್ ಗೆ ಕರೆ ಮಾಡಿ.   (8970451432 / 9341768251) ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

 

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read