ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : `ಉದ್ಯಮ ಶಕ್ತಿ’ ಯೋಜನೆಯಡಿ `ಪೆಟ್ರೋಲ್ ಬಂಕ್’ ನಲ್ಲಿ ಕೆಲಸ

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಹಿಳೆಯರ ಸ್ವಾವಲಂಬನೆಗಾಗಿ 100 ಪೆಟ್ರೋಲ್ ಬಂಕ್ ಗಳನ್ನು ಸ್ಥಾಪಿಸಿ ಅವುಗಳನ್ನು ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆಗೆ ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಸ್ತ್ರೀ ಸ್ವಾವಲಂಬನೆಗಾಗಿ 100 ಪೆಟ್ರೋಲ್ ಬಂಕ್‌ಗಳನ್ನು ಸ್ಥಾಪಿಸಿ, ಅವುಗಳನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆಗೆ ವಹಿಸಲು ಕ್ರಮ ಕೈಗೊಳ್ಳುವುದಾಗಿ ಹಾಗೂ ಪೆಟ್ರೋಲ್ ಬಂಕ್‌ಗಳ ಸ್ಥಾಪನೆಗೆ ಭೂಮಿ, ತರಬೇತಿ, ಪರವಾನಗಿ ಸೇರಿದಂತೆ ಅಗತ್ಯ ಬೆಂಬಲ ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದೇವೆ ಎಂದು ತಿಳಿಸಿದ್ದಾರೆ.

ಸ್ತ್ರೀಯರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವಲಯದಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡಾಗ ಮಾತ್ರ ದೇಶದ ಆರ್ಥಿಕ ಅಭಿವೃದ್ಧಿಯ ವೇಗ ಹೆಚ್ಚಿರುತ್ತದೆ. ಇದಕ್ಕಾಗಿ ಸ್ತ್ರೀಯರು ಉದ್ಯಮ, ಕೈಗಾರಿಕೆ, ಸೇವಾ ವಲಯದಲ್ಲಿ ಭಾಗವಹಿಸುವುದು ಅತಿ ಮುಖ್ಯ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read