HomeKarnatakaರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ

ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು :  ಸಮಾಜ ಕಲ್ಯಾಣ ಇಲಾಖೆಯಿಂದ  ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಪ್ರತಿಷ್ಠಿತ ಐ.ಐ.ಎಂ ಬೆಂಗಳೂರು. ಇವರ ಮೂಲಕ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿಗಳನ್ನು ಇಲಾಖೆಯ ಅಧಿಕೃತ ಜಾಲತಾಣ : www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.

ಸಾಮಾನ್ಯ ಅರ್ಹತೆಗಳು

  • ಅಭ್ಯರ್ಥಿಗಳು ಪರಿಶಿಷ್ಟ ಜಾತಿಗೆ ಸೇರಿದ್ದು, ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಉದ್ಯಮಗಳನ್ನು ಸ್ಥಾಪಿಸುವ ಉದ್ದೇಶವಿರುವವರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
  • ವಯೋಮಿತಿ ಕನಿಷ್ಠ – 21 ವರ್ಷಗಳು ಗರಿಷ್ಠ – 45 ವರ್ಷಗಳು,
  • ತರಬೇತಿಯ ಅವಧಿ – 5 ರಿಂದ 6 ತಿಂಗಳು.
  • 8 ದಿನದ ತರಬೇತಿಯು ಐ.ಐ.ಎಂ-ಬೆಂಗಳೂರು ಸಂಸ್ಥೆ ಕ್ಯಾಂಪಸ್‌ನಲ್ಲಿ ಹಾಗೂ MOOC ಮುಖಾಂತರ ನೀಡಲಾಗುವುದು.
  • ಐ.ಐ.ಎಂ – ಬೆಂಗಳೂರು ರವರು ನಡೆಸುವ ಸ್ತ್ರೀನಿಂಗ್ ಟೆಸ್ಟ್ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
  • ಶೇ. 100 ರಷ್ಟು ಹಾಜರಾತಿ ಕಡ್ಡಾಯ.
  • ಸ್ಟ್ರೀನಿಂಗ್ ಟೆಸ್ಟ್ ದಿನಾಂಕ 11.02.2024 ರಂದು ಐ.ಐ.ಎಂ-ಬೆಂಗಳೂರು ಕ್ಯಾಂಪಸ್‌ನಲ್ಲಿ ನಡೆಸಲಾಗುವುದು.

ತರಬೇತಿ ಪಡೆಯಲು ಇಚ್ಚಿಸುವವರು ಆನ್‌ಲೈನ್ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 17.01.2024 ರಿಂದ ದಿನಾಂಕ: 31.01.2024 ರ ಸಂಜೆ 5 ಗಂಟೆಯ ವರಗೆ ಸಲ್ಲಿಸತಕ್ಕದ್ದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್‌ಲೈನ್ ಅರ್ಜಿಯು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣ Www.sw.kar.nic.in ನಲ್ಲಿ ಲಭ್ಯವಿರುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular