HomeKarnatakaಯುವನಿಧಿ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಉದ್ಯೋಗಾಧಾರಿತ ತರಬೇತಿ

ಯುವನಿಧಿ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಉದ್ಯೋಗಾಧಾರಿತ ತರಬೇತಿ

ಚಿತ್ರದುರ್ಗ: ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಜಿಲ್ಲೆಯ ಒಟ್ಟು 7,377 ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.

ಸರ್ಕಾರದಿಂದ ನೀಡಲಾಗುತ್ತಿರುವ ನಿರುದ್ಯೋಗ ಭತ್ಯೆಯು ಜೀವನಪೂರ್ತಿ ಆದಾಯದ ಮೂಲವಲ್ಲ, ಇದೊಂದು ತಾತ್ಕಾಲಿಕ ನೆರವಾಗಿದೆ. ಫಲಾನುಭವಿಗಳು ಸ್ವಾವಲಂಬಿಗಳಾಗಲು ತಾಂತ್ರಿಕ ಹಾಗೂ ವೃತ್ತಿಪರ ಕೌಶಲ್ಯಗಳನ್ನು ಹೊಂದುವುದು ಅತ್ಯವಶ್ಯಕವಾಗಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಶೈಕ್ಷಣಿಕ ಅರ್ಹತೆ ಮಾತ್ರ ಸಾಕಾಗುವುದಿಲ್ಲ, ಉದ್ಯಮ ಕ್ಷೇತ್ರದ ಬೇಡಿಕೆಗೆ ತಕ್ಕಂತೆ ತಾಂತ್ರಿಕ ನೈಪುಣ್ಯತೆ ಮತ್ತು ಕಾರ್ಯಾನುಭವದ ಅಗತ್ಯವಿದೆ.

ಈ ಹಿನ್ನೆಲೆಯಲ್ಲಿ, ಫಲಾನುಭವಿಗಳು ಇಲಾಖೆಯ ಪೆÇೀರ್ಟಲ್  https://skillmission.karnataka.gov.in/ ನಲ್ಲಿ ತಕ್ಷಣವೇ ನೋಂದಣಿ ಮಾಡಿಕೊಂಡು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐ), ಜಿಟಿಟಿಸಿ ಹಾಗೂ ರುಡ್‍ಸೆಟ್ ತರಬೇತಿ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿರುವ ವಿವಿಧ ಉದ್ಯೋಗಾಧಾರಿತ ತರಬೇತಿಗಳಲ್ಲಿ ಭಾಗವಹಿಸಲು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತರಬೇತಿ ಪಡೆದ ನಂತರ ಕೈಗಾರಿಕೆಗಳ ಅವಶ್ಯಕತೆಗೆ ಅನುಗುಣವಾಗಿ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ತರಬೇತಿಯಲ್ಲಿ ಭಾಗವಹಿಸಿದರೂ ಸಹ ಸರ್ಕಾರ ನಿಗದಿಪಡಿಸಿರುವ ಅವಧಿಯವರೆಗೆ ನಿರುದ್ಯೋಗ ಭತ್ಯೆ ಮುಂದುವರೆಯುತ್ತದೆ. ಆದ್ದರಿಂದ ಯುವನಿಧಿ ಫಲಾನುಭವಿಗಳು ಯಾವುದೇ ಆತಂಕವಿಲ್ಲದೆ ಕೌಶಲ್ಯಾಭಿವೃದ್ಧಿ ತರಬೇತಿಗೆ ನೋಂದಣಿ ಮಾಡಿಕೊಂಡು ತರಬೇತಿ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular