ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಹತ್ತಿರ ಬಾಪೂಜಿ ಸೇವಾಕೇಂದ್ರ , ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಡಿ. 22 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿರಸ್ತೆ, ಆಲ್ಕೊಳ, ಶಿವಮೊಗ್ಗ ಹಾಗೂ ಜಿಲ್ಲಾ ಅಭಿವೃದ್ಧಿ ನೀರಿಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಶಿವಮೊಗ್ಗ ಇವರನ್ನು ನೇರವಾಗಿ ಅಥವಾ ದೂ.ಸಂ.: 08182-295514 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read