HomeKarnatakaರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : `ಮಧುಮೇಹಿ’ ಮಕ್ಕಳಿಗೆ ಉಚಿತ ಇನ್ಸುಲಿನ್

ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : `ಮಧುಮೇಹಿ’ ಮಕ್ಕಳಿಗೆ ಉಚಿತ ಇನ್ಸುಲಿನ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ 5 ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, ಇದೀಗ ಮತ್ತೊಂದು ಮಹತ್ವದ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ.

ಹೌದು,  ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಜನಪರ ಯೋಜನೆಗೆ ಅಣಿಯಾಗುತ್ತಿದೆ. ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತವಾಗಿ ಇನ್ಸುಲಿನ್ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅಂದಾಜಿನ ಪ್ರಕಾರ ಸುಮಾರು 5000 ಮಕ್ಕಳಿಗೆ ಇದರ ಪ್ರಯೋಜನ ಲಭಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅತಿ  ಚಿಕ್ಕ ವಯಸ್ಸಿನಲ್ಲೇ ಮಧುಮೇಹ ಕಾಡುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಿದೆ, ಇದನ್ನು ಆರಂಭದಲ್ಲೇ ತಡೆಗಟ್ಟುವ ನಿಟ್ಟಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಮಹತ್ತರವಾದ ಹೆಜ್ಜೆ ಇಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular