HomeKarnatakaರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ.!

ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ.!

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಅತಿಥಿ ಉಪನ್ಯಾಸಕರ ಖಾಯಂ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದೇ ಇದ್ದರೆ ಅಹೋರಾತ್ರಿ ಧರಣಿ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ವಾಲ್ಮೀಕಿ ಹಗರಣ, ಪಿಎಸ್ ಐ ಡೆತ್ ಕೇಸ್ , ದೋಸ್ತಿ ಪಕ್ಷಗಳ ಪಾದಯಾತ್ರೆ ಸೇರಿದಂತೆ ವಿವಿಧ ಹಲವು ವಿಚಾರಗಳ ರಾಜ್ಯ ಸರ್ಕಾರಕ್ಕೆ ತಲೆನೋವು ತಂದಿದೆ. ಇದರ ನಡುವೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಕ್ಕಳ ಹಿತದೃಷ್ಟಿ ಹಿನ್ನೆಲೆ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡು ಬೇಗ ಉಪನ್ಯಾಸಕರ ಸಮಸ್ಯೆ ಇತ್ಯರ್ಥಗೊಳಿಸುವಂತೆ ಉಪನ್ಯಾಸಕರು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular