ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿದ್ದು, ಒಂಟಿಯಾಗಿದ್ದ ತಂಗಿ ಮೇಲೆ ಪಾಪಿ ಅಣ್ಣ ಅತ್ಯಾಚಾರ ಎಸಗಿದ್ದಾನೆ. ಸುರತ್ಕಲ್ ನಲ್ಲಿ ಈ ಘಟನೆ ನಡೆದಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಸೋದರ ( ದೊಡ್ಡಪ್ಪನ ಮಗ) ಅತ್ಯಾಚಾರ ಎಸಗಿದ್ದಾನೆ.
ಸುರತ್ಕಲ್ ನ ಕುಳಾಯಿ ಎಂಬಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಅಣ್ಣ ತಂಗಿ ಮೇಲೆ ಎರಗಿದ್ದಾನೆ.ಬಾಗಲಕೋಟೆ ಜಿಲ್ಲೆ ಬಾದಾಮಿಯ ಯುವಕ ಈ ಕೃತ್ಯ ಎಸಗಿದ್ದಾನೆ.
ಆರೋಪಿ ಕುಟುಂಬ ಹಾಗೂ ಸಂತ್ರಸ್ತೆ ಕುಟುಂಬ ಒಂದೇ ಮನೆಯಲ್ಲಿ ವಾಸವಾಗಿತ್ತು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಣ್ಣ ಅತ್ಯಾಚಾರ ಎಸಗಿ ಯಾರಿಗಾದರೂ ಈ ವಿಷಯ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಬಾಲಕಿ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

