HomeKarnatakaSHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ಪತಿಯೊಂದಿಗೆ ಜಗಳವಾಡಿ ತವರಿಗೆ ಹೋಗುತ್ತಿದ್ದ ಮಹಿಳೆ...

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ಪತಿಯೊಂದಿಗೆ ಜಗಳವಾಡಿ ತವರಿಗೆ ಹೋಗುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್.!

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ 41 ವರ್ಷದ ಮಹಿಳೆಗೆ ಮದ್ಯ ಬೆರೆಸಿದ ಪಾನೀಯ ನೀಡಿ ಪ್ರಜ್ಞೆ ತಪ್ಪಿಸಿ, 10 ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 41 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ವರದಿಯ ಪ್ರಕಾರ, ಮಹಿಳೆ ಪತಿಯೊಂದಿಗೆ ಜಗಳವಾಡಿ ತನ್ನ ತವರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಜೂನ್ 3ರಂದು ನಡೆದ ಘಟನೆಯಲ್ಲಿ, ಹಂದಿ ಬೇಟೆಗೆ ತೆರಳಿದ್ದ ಕೆಲ ಯುವಕರು ಮಹಿಳೆಗೆ “ಸುಸ್ತಾಗಿದ್ದೀಯಾ, ಕೂಲ್ ಡ್ರಿಂಕ್ಸ್ ಕುಡಿ” ಎಂದು ಹೇಳಿ ಮದ್ಯ ಬೆರೆಸಿದ ಪಾನೀಯವನ್ನು ಕುಡಿಸಿದ್ದಾರೆ ಎನ್ನಲಾಗಿದೆ. ನಂತರ ಮಹಿಳೆಯನ್ನು ತೋಟವೊಂದಕ್ಕೆ ಕರೆದೊಯ್ದು ರಾತ್ರಿ ಇಂದ ಮುಂಜಾನೆವರೆಗೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಗಳು ಮಹಿಳೆಯ ಬೆತ್ತಲೆ ಫೋಟೋ ಹಾಗೂ ವೀಡಿಯೊಗಳನ್ನು ಚಿತ್ರೀಕರಿಸಿ, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ವೀಡಿಯೊಗಳನ್ನು ಅಳಿಸಲಾಗಿದೆ ಎನ್ನಲಾಗಿದೆ. ನಾಗರಾಜ್, ಅರ್ಚನಾ, ಇಸ್ತ್ರೀ ನಾಗರಾಜ್, ಬಸವಂತ, ಹೆಗ್ಗ ಮಾರುತಿ, ಕುಂದೂರು ಮಾರುತಿ, ಜೋಗಿ ಸುನೀಲ್, ಮನು, ಪ್ರದೀಪ್ , ಮಧು ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆ ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಯ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ.  ಈ ಪ್ರಕರಣದ ತನಿಖೆ ಮುಂದುವರಿದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular