HomeKarnatakaSHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ತಂದೆ ಮತ್ತು ಆತನ ಸ್ನೇಹಿತನಿಂದಲೇ ಅಪ್ರಾಪ್ತ...

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ತಂದೆ ಮತ್ತು ಆತನ ಸ್ನೇಹಿತನಿಂದಲೇ ಅಪ್ರಾಪ್ತ ಮಗಳ ಮೇಲೆ 2 ವರ್ಷ ನಿರಂತರ ಅತ್ಯಾಚಾರ

ರಾಯಚೂರು: ಕರುಳ ಕುಡಿಯನ್ನು ರಕ್ಷಿಸಬೇಕಾದ ತಂದೆಯೇ ಕಾಮಪಿಶಾಚಿಯಾದ ಘೋರ ಘಟನೆಯೊಂದು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಿಂದ ತನ್ನ ಅಪ್ರಾಪ್ತ ಮಗಳ ಮೇಲೆ ತಂದೆ ಹಾಗೂ ಆತನ ಸ್ನೇಹಿತ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದು, ಇದೀಗ ಇಬ್ಬರೂ ಕಾಮುಕರು ಪೊಲೀಸರ ಅತಿಥಿಯಾಗಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ತಂದೆ ಹಾಗೂ ಆತನ ಸ್ನೇಹಿತ ಸೇರಿ ಅಪ್ರಾಪ್ತ ಬಾಲಕಿಯ ಮೇಲೆ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ.

ಬಾಲಕಿಯ ತಂದೆ ಅಮರೇಶ್ ಹಾಗೂ ಆತನ ಸ್ನೇಹಿತ ಸೀನು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ರಕ್ಷಿಸಿ ಸಾಂತ್ವಾನ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಅಲ್ಲಿ ಬಾಲಕಿಯು ತನಗೆ ನಡೆದ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಮತ್ತು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇಬ್ಬರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular