HomeKarnatakaರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಕಲಬುರಗಿ: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಲಬುರಗಿಯ ನ್ಯಾಷನಲ್ ಸಾರ್ವಜನಿಕರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕಲಬುರಗಿ ನಗರದಲ್ಲಿ ನಡೆದಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿ ಮಾನಸಿಕ ಅಸ್ವಸ್ಥಳಾಗಿದ್ದು ತಾಯಿಯೊಂದಿಗೆ ವಾಸಿಸುತ್ತಿದ್ದಾಳೆ. ಆಕೆಯ ತಾಯಿ ಮನೆಯಲ್ಲಿ ಇಲ್ಲದ ವೇಳೆ ಘಟನೆ ನಡೆದಿದೆ.

ಬಾಲಕಿಗೆ ಗಾಯಗಳಾಗಿರುವುದನ್ನು ಗಮನಿಸಿದ ಎಂದು ತಾಯಿ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ತಪಾಸಣೆ ನಡೆಸಿದಾಗ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ. ಅತ್ಯಾಚಾರಿ ಪತ್ತೆಗೆ ತಂಡ ರಚಿಸಿರುವ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಘಟನೆ ವಿರೋಧಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದು, ಅಪ್ರಾಪ್ತ ಬಾಲಕಿ ಮೇಲೆ ನಡೆದ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದ್ದು, ಕೂಡಲೇ ಅತ್ಯಾಚಾರಿಯನ್ನು ಬಂಧಿಸಿ ಜೈಲಿಗಟ್ಟಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular