BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!

ಬೆಂಗಳೂರು : ಬೆಂಗಳೂರಿನ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರದ ಮಾಕಳಿಯಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಬೆಳಗ್ಗೆ ದೇವಸ್ಥಾನಕ್ಕೆಂದು ಇನ್ನೋವಾ ಕಾರಿನಲ್ಲಿ 8 ಮಂದಿ ಬಂದಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ .ಅಪಘಾತದ ರಭಸಕ್ಕೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read