ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.


ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
