ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
ಸಂಡೂರಿನ ಜೈ ಸಿಂಗಪುರ ಬಳಿ ಈ ಅಪಘಾತ ಸಂಭವಿಸಿದೆ. ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:ಭೀಕರ ಅಪಘಾತ