HomeKarnatakaBREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಟ್ರಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು...

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಟ್ರಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ದುರ್ಮರಣ.!


ಬಾಗಲಕೋಟೆ : ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕೆಟ್ಟೆಕೆರೆ ಗ್ರಾಮದ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು 2 ವರ್ಷದ ಮಗು ಹಲಕಿ ಪಾಂಡೆ, ಮನೀಶ್ ಪಾಂಡೆ (23) ಲಕ್ಷ್ಮೀ ಚಿರಮಡಿ (27) ರೇಖಾ ಭೂಕೆ ಎಂದು ಗುರುತಿಸಲಾಗಿದೆ.ಮೃತರು ಮಹಾರಾಷ್ಟ್ರ ಮೂಲದವರು ಎಂದು ಗುರುತಿಸಲಾಗಿದೆ.ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಒಬ್ಬ ಪುಟ್ಟ ಮಗು ಹಾಗೂ ಮೂವರು ದೊಡ್ಡವರು (ಒಟ್ಟು ನಾಲ್ವರು) ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಅತೀವ ವೇಗ ಅಥವಾ ಚಾಲಕನ ನಿಯಂತ್ರಣ ತಪ್ಪಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.ಕಾರ್ಮಿಕರು ಕಬ್ಬು ಕಟಾವು ಮಾಡುವ ಕೆಲಸಕ್ಕೆ ಹೊರಟಿದ್ದರು ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular