ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಗೊರವನಹಳ್ಳಿ ಸಮೀಪ ಲಾರಿ, ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.
ಲಾರಿ ಚಾಲಕ ಹನುಮಂತ(55), ಕಾರ್ಮಿಕ ನಾಗರಾಜ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಟಿಪ್ಪರ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಹನುಮಂತ ಬಂಗಾರಪೇಟೆ ತಾಲೂಕಿನ ಕಣಿಂಬೆಲೆ ನಿವಾಸಿಯಾಗಿದ್ದಾರೆ. ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.