ಕಾರವಾರ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ ನಲ್ಲಿ ನಡೆದಿದೆ.
ಮೃತರನ್ನ ಬಾಗಲಕೋಟೆ ಮೂಲದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಬಾದಾಮಿ ತಾಲೂಕಿನ ಗುಳೆದಗುಡ್ಡ ಗ್ರಾಮದ ನಿಲವ್ವ ಹರದೊಳ್ಳಿ (40) ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಹಾಗೂ ಮತ್ತೋರ್ವ 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಾಗಲಕೋಟೆಯಿಂದ ಮಂಗಳೂರು ಕಡೆಗೆ ಬಸ್ ತೆರಳುತ್ತಿತ್ತು. ಓವರ್ ಟೇಕ್ ಮಾಡುವ ಭರದಲ್ಲಿ ರಸ್ತೆ ಪಕ್ಕ ನಿಂತಿದ್ದ ಕೇರಳ ಮೂಲದ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ.